ಈಜಲು ನದಿಗಿಳಿದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು
Sunday, October 22, 2023
ಅಮರಾವತಿ: ಈಜಲು ತೆರಳಿರುವ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಗೌತಮಿ-ಗೊದಾವರಿ ನದಿಗೆ ಈ ವಿದ್ಯಾರ್ಥಿಗಳು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಾಲೇಜಿಗೆ ರಜೆಯಿದ್ದ ಹಿನ್ನಲೆಯಲ್ಲಿ ಏಳು ಮಂದಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಜತೆಗೂಡಿ ಪ್ರವಾಸಕ್ಕೆಂದು ಬಂದಿದ್ದರು. ಮೊದಲು ಯಾನಕ್ಕೆ ತೆರಳಿರುವ ವಿದ್ಯಾರ್ಥಿಗಳು ಆ ಬಳಿಕ ಶನಿವಾರ ಸಂಜೆ 4:30ರ ಸುಮಾರಿಗೆ ಈಜಲೆಂದು ಗೊದಾವರಿ ನದಿಗೆ ಇಳಿದಿದ್ದಾರೆ. ಈಜುವ ವೇಳೆ ನೀರು ಉಕ್ಕೇರಿ ಹರಿದಿ ಪರಿಣಾಮ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನದಿಯಿಂದ ನಾಲ್ವರು ವಿದ್ಯಾರ್ಥಿಗಳ ಮೃತದೇಹಗಳನ್ನು ಮೇಲೆತ್ತಲಾಗಿದೆ. ಇದೀಗ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ CRPC 174ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.