ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಶಿರಾಡಿ ಘಾಟ್ ನಲ್ಲಿ ಬೆಂಕಿಗಾಹುತಿ - ಅಕ್ಕಿ ಸಹಿತ ಲಾರಿ ಭಸ್ಮ
Sunday, October 22, 2023
ಮಂಗಳೂರು: ಹಾಸನದಿಂದ ಮಂಗಳೂರಿಗೆ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಶಿರಾಡಿ ಘಾಟ್ ಹೆದ್ದಾರಿಯ 2ನೇ ತಿರುವಿನಲ್ಲಿ ಬರುತ್ತಿದ್ದ ವೇಳೆಗೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಸೂಚನೆ ದೊರೆಯುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯಿಂದ ಲಾರಿ ಹಾಗೂ ಲಾರಿಯಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಲಾರಿಯು ಸರಕು ಸಹಿತ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಘಟನೆಯಿಂದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಗಂಟೆ ಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಆಗಿದ್ದು ಪ್ರಯಾಣಿಕರು ರಾತ್ರಿ ವೇಳೆ ಪರದಾಟ ನಡೆಸಿದ್ದಾರೆ.