-->
ಉಪ್ಪಿನಂಗಡಿ: 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಉಪ್ಪಿನಂಗಡಿ: 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ



ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿದೆ.

ಸುಮಾರು 12 ಅಡಿ ಉದ್ದದ ಸೆರೆ ಹಿಡಿದ ಉರಗಪ್ರೇಮಿ ಕೆ. ಝಕರಿಯಾ ಎಂಬುವರು ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ.ಝಕರಿಯಾ ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಹಿಡಿದಿದ್ದಾರೆ. ಬಳಿಕ ಅದನ್ನು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.



Ads on article

Advertise in articles 1

advertising articles 2

Advertise under the article