ಮಂಗಳೂರು: ಅನ್ಯಕೋಮಿನ ಜೋಡಿಯ ಸುತ್ತಾಟ ಬೆನ್ನಟ್ಟಿ ತರಾಟೆಗೆ ತೆಗೆದುಕೊಂಡ ಬಜರಂಗದಳದ ಕಾರ್ಯಕರ್ತರು
Monday, November 27, 2023
ಮಂಗಳೂರು: ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿ ಜೊತೆಯಾಗಿ ಸುತ್ತಾಡುತ್ತಿದ್ದುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ.
ಮಂಕಿ ಸ್ಟಾಂಡ್ ನಲ್ಲಿ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಪಾಂಡೇಶ್ವರ ಬಳಿಯ ನಿವಾಸಿ ನೂರುಲ್ ಅಮೀನ್ ಚಿಕ್ಕಮಗಳೂರಿನ ಹಿಂದೂ ಯುವತಿಯೊಂದಿಗೆ ಸುತ್ತಾಡುತ್ತಿದ್ದ. ಸ್ಕೂಟರ್ ನಲ್ಲಿ ಈ ಜೋಡಿ ಸುತ್ತಾಡುತ್ತಿರುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕ್ ನಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಸ್ಕೂಟರ್ ಅಡ್ಡ ಹಾಕಿ ಈ ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವೇಳೆ ಸ್ಥಳದಲ್ಲಿ ಮತ್ತೊಂದು ಕೋಮಿನ ಯುವಕರು ಜಮಾಯಿಸಿದ್ದಾರೆ. ಆಗ ಇತ್ತಂಡಗಳ ನಡುವೆ ಮಾತಿನ ಚಕಮಕಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯ ಪ್ರವೇಶಿಸಿದ ಪಾಂಡೇಶ್ವರ ಠಾಣಾ ಪೊಲೀಸರು ಗುಂಪನ್ನು ಚದುರಿಸಿದ್ದಾರೆ. ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.