ಬೆಳ್ತಂಗಡಿ: ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆಯ ಆಡಿಯೋ ವೈರಲ್ - ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು
Monday, November 20, 2023
ಬೆಳ್ತಂಗಡಿ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವ ಆಡಿಯೋ ವೈರಲ್ ಅಗಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಠಾಣೆಗೆ ನೀಡಿರುವ ದೂರು ನೀಡಿದ್ದಾರೆ. ಆದ್ದರಿಂದ ಪೊಲೀಸರು ರಜಿತ್ ಕೊಕ್ಕಡ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ಬಿಜೆಪಿ ಕಾರ್ಯಕರ್ತ ರಜಿತ್ ಕೊಕ್ಕಡ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯರನ್ನಜ ಅಶ್ಲೀಲವಾಗಿ ನಿಂದಿಸಿದ್ದ. ಈತನ ಮಾತಿನ ಆಡಿಯೋವನ್ನು ಇರಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತ ಹಕೀಮ್ ಕೊಕ್ಕಡ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಪೊಲೀಸರು ರಜಿತ್ ಕೊಕ್ಕಡ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.