ಮಂಗಳೂರಿನಲ್ಲಿ ಹಾರ್ನ್ ನಿಷೇಧಿತ ಪ್ರದೇಶ ಘೋಷಣೆ - ಹಾರ್ನ್ ಹಾಕಿದರೆ ದಂಡ
Monday, November 20, 2023
ಮಂಗಳೂರು: ನಗರದಲ್ಲಿ ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ “ಹಾರ್ನ್ ನಿಷೇಧಿತ ಪ್ರದೇಶ” ವನ್ನು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಹಾರ್ನ್ ಹಾಕಿದ್ದಲ್ಲಿ ಅಂತಹ ವಾಹನ ಸವಾರರ ಮೇಲೆ ದಂಡ ವಿಧಿಸಲಾಗುತ್ತದೆ.
ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನ ಚಾಲಕರು ಅನಾವಶ್ಯಕ ಕರ್ಕಶ ಹಾರ್ನ್ ಹಾಕುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜು ಹಾಗೂ ಆಸ್ಪತ್ರೆಗಳ ಪ್ರದೇಶದಲ್ಲಿ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕೆಲವು ಪ್ರದೇಶವನ್ನು ಹಾರ್ನ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.
*ಹಾರ್ನ್ ನಿಷೇಧಿತ ಪ್ರದೇಶ*
*ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ*
I. ರಾವ್ ಆ್ಯಂಡ್ ರಾವ್ ವೃತ್ತದ ಸಮೀಪದ ಮೈದಾನ 3ನೇ ಅಡ್ಡ ರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ.
II. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್ ವರೆಗೆ.
III. ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ.
*ಹಂಪನಕಟ್ಟೆ ಜಂಕ್ಷನ್*
I. ಹಂಪನಕಟ್ಟೆ ಜಂಕ್ಷನ್‍ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ.
II. ಮಿಲಾಗ್ರಿಸ್ ಚರ್ಚ್ ಬಳಿಯ ವೆನ್‌ಲಾಕ್ ಆಸ್ಪತ್ರೆಯ ಗೇಟ್ ನಿಂದ ಮುತ್ತಪ್ಪ ಗುಡಿಯವರೆಗೆ.
III. ಹಂಪನಕಟ್ಟೆ ಜಂಕ್ಷನ್‌ನಿಂದ ಮಿನಿ ವಿಧಾನ ಸೌಧ ಕಟ್ಟಡದವರೆಗೆ.
*ಡಾ.ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರದೇಶ*
I. ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50 ಮೀಟರ್ ಪ್ರದೇಶ.
II. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
III. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ.
IV. ಬಾವುಟಗುಡ್ಡದಿಂದ ಅಂಬೇಡ್ಕರ್ ವೃತ್ತದವರೆಗೆ.
ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್ ತಿರುವಿನವರೆಗೆ
ದೇರಳಕಟ್ಟೆ ಯೇನಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀ ಪ್ರದೇಶ
ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀ. ಪ್ರದೇಶ
ವಾಹನ ಚಾಲಕರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ. ಹಾರ್ನ್ ನಿಷೇಧಿಸಿರುವ ಸೂಚನಾ ಫಲಕವಿರುವೆಡೆ ಹಾರ್ನ್ ಬಳಸಿದ್ದಲ್ಲಿ ಅಂಥಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1000 ರೂ. ದಂಡ ಹಾಗೂ ಎರಡನೆಯ ಹಾಗೂ ಬಳಿಕದ ಪ್ರತಿ ಉಲ್ಲಂಘನೆಗೂ 2000 ರೂ. ದಂಡ ವಿಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ.