ಮಂಗಳೂರು: ಎಂಡಿಎಂಎ ಮಾದಕವಸ್ತು ಮಾರುತ್ತಿದ್ದ ಮಡಿಕೇರಿ ಮೂಲದ ಮೂವರು ಅರೆಸ್ಟ್
Monday, November 6, 2023
ಮಂಗಳೂರು: ನಗರದ ಫಳ್ನೀರ್ ನಲ್ಲಿ ನಿಷೇಶಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿ, 95,000 ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ಕೊಯಿನೂರು ರೋಡ್ ನಿವಾಸಿ ಪ್ರಮೋದ್ ಎಮ್.ಜಿ.(30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ನ ಶಕ್ತಿ ಪ್ರಸಾದ್ ರೆಸಿಡೆನ್ಸಿ ಬಳಿ ನಿವಾಸಿ ಮೊಹಮ್ಮದ್ ರಾಶೀದ್ ಎಂ.ಝಡ್(41), ಮಡಿಕೇರಿಯ ಕಡಗದಾಳು ನಿವಾಸಿ ದರ್ಶನ್ ಎಸ್(24) ಬಂಧಿತ ಆರೋಪಿಗಳು.
ನಗರದ ಪಳ್ನೀರಿನ ಬ್ಲೂ ಸ್ಟಾರ್ ಲಾಡ್ಜ್ ಬಳಿ ಮೂವರು ಎಂಡಿಎಂಎ ಮಾದಕವಸ್ತುವನ್ನು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 95,000 ರೂ. ಎಂದು ಅಂದಾಜಿಸಲಾಗಿದೆ.
ಆರೋಪಿತರಲ್ಲಿ ಪ್ರಮೋದ್ ಎಮ್ ಜಿ ಅಲಿಯಾಸ್ ಡಿಸ್ಕ್ ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿದೆ. ಮೊಹಮ್ಮದ್ ರಾಶೀದ್ ಎಂ.ಝಡ್ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕಣಗಳು ದಾಖಲಾಗಿದೆ. ದರ್ಶನ್ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.