ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳಲ್ಲೋರ್ವ ಪ್ರಭಾವಿ ರಾಜಕಾರಣಿಯ ಸಂಬಂಧಿ
Tuesday, November 28, 2023
ಗ್ವಾಲಿಯರ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ 17ರ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ತನ್ನ ಇತರ ಮೂವರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತೆ ದಲಿತ ಸಮುದಾಯಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎನ್ನಲಾಗುತ್ತಿದೆ.
ನವೆಂಬರ್ 21ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ನಾಲ್ಕು ದಿನಗಳ ಬಳಿಕ ಸಂತ್ರಸ್ತೆ ಪೊಲೀಸ್ ದೂರು ದಾಖಲಿಸಿದ್ದಾಳೆ. ಈ ಘಟನೆಯನ್ನು ಬಹಿರಂಗಪಡಿಸದಂತೆ ಆರೋಪಿಗಳು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ದೂರು ನೀಡಲು ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂತ್ರಸ್ತೆಗೆ ಕಳೆದ ವರ್ಷ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಗೆಳೆಯನಾಗಿದ್ದ. ನವೆಂಬರ್ 21ರಂದು ಈತ ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು ಇತರ ಮೂವರೊಂದಿಗೆ ಅತ್ಯಾಚಾರ ಎಸಗಿದ್ದಾನೆ. ಈ ಪೈಕಿ ಓರ್ವ ಪ್ರಭಾವಿ ರಾಜಕಾರಣಿಯೊಬ್ಬರ ನಿಕಟ ಸಂಬಂಧಿ ಎಂದು ಪೊಲೀಸ್ ಮೂಲಗಳು ಹೇಳಿವೆ.