ಬೆಂಗಳೂರು: ಇಸ್ಲಾಂಗೆ ಮತಾಂತರಗೊಳ್ಳಿ ಇಲ್ಲವೇ ಸಾಯಲು ಸಿದ್ಧರಾಗಿ - ಬೆಂಗಳೂರಿನಲ್ಲಿ40ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ಸಂದೇಶ
Friday, December 1, 2023
ಬೆಂಗಳೂರು: ರಾಜ್ಯ ರಾಜಧಾನಿಯ 40ಕ್ಕೂ ಅಧಿಕ ಖಾಸಗಿ ಶಾಲೆಗಳಿಗೆ ಇಂದು ಬೆಳ್ಳಂಬೆಳಗ್ಗೆ ಮುಜಾಹಿದ್ದೀನ್, ಹೆಸರಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇದು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ ಸಿಬಂದಿಯನ್ನು ಆತಂಕಕ್ಕೆ ದೂಡಿದೆ. ಬೆಂಗಳೂರು ಉತ್ತರ ವಲಯ ಮತ್ತು ಬನ್ನೇರುಘಟ್ಟ ವ್ಯಾಪ್ತಿಯ 40ಕ್ಕೂ ಶಾಲೆಗಳಿಗೆ ಬೆದರಿಕೆ ಇರುವ ಇಮೇಲ್ ಬಂದಿದೆ.
ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸುರಕ್ಷತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಸಾರಲಾಗಿದೆ. ಖಾರಿಜೈಟ್ಸ್ ಎಂಬ ಮೂಲಭೂತವಾದಿ ಸಂಘಟನೆ ಹೆಸರಲ್ಲಿ ಇ-ಮೇಲ್ ಬಂದಿದೆ. ಎಲ್ಲಾ ಶಾಲೆಗೂ ಒಂದೇ ರೀತಿಯ ಇ- ಮೇಲ್ ಬಂದಿದೆ ಎಂದು ಹೇಳಲಾಗುತ್ತಿದೆ.
ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ. ತಾಜ್ ಮೇಲೆ ದಾಳಿ ಮಾಡಿದಂತೆ ದಾಳಿ ಮಾಡುತ್ತೇವೆ. ಆದ್ದರಿಂದ ಇಸ್ಲಾಂಗೆ ಮತಾಂತರವಾಗಿ ಇಲ್ಲವಾದಲ್ಲಿ ಸಾಯಲು ಸಿದ್ಧರಾಗಿ ಎಂದು ಬೆದರಿಕೆ ಇ-ಮೇಲ್‌ನಲ್ಲಿ ಸಂದೇಶವಿದೆ.
ಶಾಲೆಯ ಮೈದಾನದಲ್ಲಿ ಸ್ಫೋಟಕಗಳನ್ನು ಇರಿಸಿದ್ದೇವೆ. ನವೆಂಬರ್ 26ರಂದು ಅಲ್ಲಾಹನ ಮಾರ್ಗದಲ್ಲಿ ನಮ್ಮ ಹುತಾತ್ಮರು ನೂರಾರು ಮೂರ್ತಿ ಪೂಜಕರನ್ನು ಹತ್ಯೆ ಮಾಡಿದ್ದಾರೆ. ಲಕ್ಷಾಂತರ ಕಾಫಿರರ ಕುತ್ತಿಗೆಗೆ ಕತ್ತಿ ಹಿಡಿಯೋದರಲ್ಲಿ ಅವರು ಶಕ್ತಿಶಾಲಿಗಳಾಗಿದ್ದಾರೆ. ನೂರಾರು ಮುಜಾಹಿನ್ ಗಳು ಅಲ್ಲಾಹನ ಮಾರ್ಗದಲ್ಲಿ ಹೋರಾಡಲು ಸಜ್ಜಾಗಿದ್ದೇವೆ. ನೀವೆಲ್ಲರೂ ಅಲ್ಲಾಹನ ಶತ್ರುಗಳು. ನಾವು ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಹತ್ಯೆ ಮಾಡುತ್ತೇವೆ. ನೀವು ನಮ್ಮ ಗುಲಾಮರಾಗದೆ ಬೇರೆ ಆಯ್ಕೆಗಳಿಲ್ಲ. ಅಲ್ಲಾಹನ ನೈಜ ಧರ್ಮವನ್ನು ಸ್ವೀಕರಿಸಿ. ದೇಗುಲಗಳು, ನಿಮ್ಮ ಮೂರ್ತಿಗಳು, ಬುದ್ಧನಿಂದ ಇನ್ಫಿನಿಟಿ ವರೆಗೆ ಸ್ಫೋಟಕಗಳೊಂದಿಗೆ ಅವರು ಬರುತ್ತಿದ್ದಾರೆ.
ಬಿಸ್ಮಿಲ್ಲಾಹ್, ನಾವು ಇಡೀ ಭಾರತದಲ್ಲಿ ಅಲ್ಲಾಹನ ನೈಜ ಧರ್ಮವನ್ನು ಎಲ್ಲೆಡೆ ಹರಡಲಿದ್ದೇವೆ. ನಾವು ನಿಮ್ಮಮೇಲೆ ದಾಳಿಕೋರರನ್ನು ಕಳಿಸಿದ್ದೇವೆ. ಬಿಸ್ಮಿಲ್ಲಾಹ್, ನಾಳೆ ಪ್ರಪಂಚದಾದ್ಯಂತ ಸಾವಿರಾರು ಝಿಯೋನಿಸ್ಟ್‌ಗಳು ಸಾಯಲಿದ್ದಾರೆ. ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಇಸ್ಲಾಂನ ಭಾರವಾದ ಖಡ್ಗಕ್ಕೆ సిలుಕಿ ಸಾಯಿರಿ. ಸತ್ಯನಿಷೇಧಿಗಳು ನಿಮ್ಮ ಮುಂದೆ ಸಿಕ್ಕಾಗ ಅವರ ಶಿರಚ್ಛೇದ ಮಾಡಿರಿ. ಅವರ ಎಲ್ಲಾ ಬೆರಳುಗಳನ್ನೂ ಕತ್ತರಿಸಿ. ಬಹುದೇವಾರಾಧಕರು ನಿಮ್ಮವಿರುದ್ಧ ಹೋರಾಟ ಮಾಡುವಂತೆ ನೀವೂ ಅವರ ವಿರುದ್ಧ ಹೋರಾಡಿರಿ. ಅಲ್ಲಾಹು ಅಕ್ಟರ್ ಎಂದು ಇಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ.