-->
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರಕಾರದಿಂದ 50ಲಕ್ಷ ರೂ. ಪರಿಹಾರ ಮಂಜೂರು

ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರಕಾರದಿಂದ 50ಲಕ್ಷ ರೂ. ಪರಿಹಾರ ಮಂಜೂರು


ಬೆಂಗಳೂರು: ಇತ್ತೀಚೆಗೆ ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನ ಮಂಜೂರು ಮಾಡಿ ಸಿಎಂ ಸಿದ್ದರಾಮಯ್ಯನವರು ಆದೇಶಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆಸಿದ ಕದನದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರಧನವನ್ನು ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿರಿಸಿ ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು. ಆದರೆ ದೇಶದ ಕೋಟ್ಯಂತರ ಮಂದಿ ಜನಯೆಯ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು, ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article