ಡಿಸೆಂಬರ್ 8 ರವರೆಗೆ ಈ ಆರು ರಾಶಿಯವರಿಗೆ ತುಂಬಾನೇ ಅದೃಷ್ಟ...!!
Tuesday, December 5, 2023
ವೃಷಭ ರಾಶಿ
ಹಣಕಾಸಿನ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಅದೃಷ್ಟದ ವಾರವಾಗಿದೆ. ಆರ್ಥಿಕವಾಗಿ ಈ ವಾರ ನಿಮಗೆ ಅನುಕೂಲಕರವಾಗಿದೆ. ಏನಾದರೂ ಆಸ್ತಿ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಉದ್ಯೋಗಿಗಳಿಗೆ ಈ ವಾರ ಕೆಲಸದ ವಿಷಯದಲ್ಲಿ ಉತ್ತಮವಾಗಿರಲಿದೆ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ವೈಯಕ್ತಿಕ ಜೀವನದಲ್ಲಿ ಖುಷಿ ಇರಲಿದೆ. ಈ ಅವಧಿಯಲ್ಲಿ ಮನೆಯಲ್ಲಿ ಹಬ್ಬದ ವಾತಾವರಣ ಇರುತ್ತದೆ. ಆರ್ಥಿಕ ದೃಷ್ಟಿಯಿಂದ ಈ ವಾರ ತುಂಬಾ ಒಳ್ಳೆಯದು, ಈ ವಾರದಲ್ಲಿ ನಿಮಗೆ ಕಳೆಯ ಸಾಲ ತೀರಿಸಲು ಕೂಡ ಸಾಧ್ಯವಾಗುವುದು. ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭವನ್ನು ಪಡೆಯಬಹುದು.
ಕರ್ಕ ರಾಶಿ
ವಾರದ ಆರಂಭ ನಿಮಗೆ ಚೆನ್ನಾಗಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ನೀವು ಚಿಕ್ಕ ನಿರ್ಧಾರಗಳನ್ನು ಕೂಡ ಜಾಗ್ರತೆಯಿಂದ ತೆಗೆದುಕೊಳ್ಳಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ ಈ ಅವಧಿಯಲ್ಲಿ ಒಳ್ಳೆಯ ಲಾಭಗಳಿಸುವಿರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಖರ್ಚುಗಳು ಕಡಿಮೆಯಾಗುತ್ತವೆ, ಇದರಿಂದ ಆರ್ಥಿಕವಾಗಿ ಒಳ್ಳೆಯದಿದೆ. ಈ ಸಮಯದಲ್ಲಿ, ನೀವು ಯಾವುದೇ ಹಳೆಯ ಸಣ್ಣ ಸಾಲವನ್ನು ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರಸ್ಥರಿಗೆ ಈ ವಾರ ಉತ್ತಮವಾಗಿದೆ. ಈ ಸಮಯದಲ್ಲಿ ನೀವು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು.
ಕುಂಭ ರಾಶಿ
ಹಣದ ವಿಷಯದಲ್ಲಿ ಈ ವಾರ ನಿಮಗೆ ತುಂಬಾ ಉತ್ತಮ. ನಿಮ್ಮ ಆದಾಯ ಚೆನ್ನಾಗಿರಲಿದೆ. ಈ ಸಮಯದಲ್ಲಿ, ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ನಿಮ್ಮ ಕೆಲಸವೂ ಪೂರ್ಣಗೊಳ್ಳುತ್ತದೆ. ವೈವಾಹಿಕ ಜೀವನದಲ್ಲಿಖುಷಿ ಇರಲಿದೆ. ನಿಮ್ಮ ಸಂಗಾತಿಯು ಕೆಲವು ಉತ್ತಮ ಯಶಸ್ಸನ್ನು ಸಾಧಿಸಬಹುದು. ಕೆಲಸದ ವಿಷಯದಲ್ಲಿ ಈ ಸಮಯವು ನಿಮಗೆ ಉತ್ತಮವಾಗಿರುತ್ತದೆ.
ಮೀನ ರಾಶಿ
ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಮತ್ತಷ್ಟು ಬಲಗೊಳ್ಳುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಈ ವಾರ ಉದ್ಯಮಿಗಳಿಗೆ ಉತ್ತಮ ಸೂಚನೆಗಳಿವೆ. ನಿಮ್ಮ ಯಾವುದೇ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸಬಹುದು.