ಮಂಗಳೂರು: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ - ಚಾಲಕ ವಶಕ್ಕೆ
Thursday, December 7, 2023
ಮಂಗಳೂರು: ನಗರದ ಜೆಪ್ಪು ಮಾರ್ನಮಿಕಟ್ಟೆಯಲ್ಲಿ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿರುವ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕಡಂಬಾರ್ ನಿವಾಸಿ ಅಕ್ಷಯ್ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವ ಆರೋಪಿ. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ಷಯ್ ಮದ್ಯದ ಮತ್ತಿನಲ್ಲಿ ಕೇರಳ ನೋಂದಾಯಿತ ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ಜೆಪ್ಪು ಮಾರ್ನೆಮಿಕಟ್ಟೆಯಲ್ಲಿ ಎದುರಿನಿಂದ ಬರುತ್ತಿದ್ದ ಎರಡು ಕಾರು ಹಾಗೂ ಒಂದು ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಚಾಲಕ ಅಕ್ಷಯ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.