ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಬಲಿ
Friday, December 22, 2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೋರ್ವ ಕೊರೊನಾ ಸೋಂಕಿತ ಬಲಿಯಾಗಿದ್ದಾರೆ.
ಉತ್ತರಭಾರತ ಮೂಲದ 40 ವರ್ಷದ ಕೂಲಿ ಕಾರ್ಮಿಕ ಮೃತಪಟ್ಟಿರುವ ಕೊರೊನಾ ಸೋಂಕಿತ ವ್ಯಕ್ತಿ. ಡಯಾಬಿಟೀಸ್ ಹಾಗೂ ತೀವ್ರ ಆಲ್ಕೋಹಾಲಿಕ್ ನಿಂದಾಗಿ ಉಸಿರಾಟದ ತೊಂದರೆಯಿಂದ ಗಂಭೀರ ಸ್ಥಿತಿಯಲ್ಲಿದ್ದ ಇವರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆ ಬಳಿಕ ತಪಾಸಣೆ ಮಾಡಿದಾಗ ಅವರಿಗೆ ಕೊರೊನಾ ಸೋಂಕು ದೃಢಗೊಂಡಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಸಾವಿಗೆ ಕೊರೊನಾ ಸೋಂಕು ಕಾರಣವೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಮೂರು ಪ್ರಕರಣಗಳು ಪತ್ತೆಯಾಗಿತ್ತು. ಉಡುಪಿ ಜಿಲ್ಲೆಯ ವೃದ್ದರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ತಪಾಸಣೆ ನಡೆಸಿದಾಗ ಕೊರೊನಾ ಪತ್ತೆಯಾಗಿತ್ತು. ಸುಳ್ಯದ ಮಹಿಳೆಯೊಬ್ಬರು ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು.