ಭೂಗತ ಪಾತಕಿ ದಾವೂದ್ ಇಬ್ರಾಹೀಂ ಹಠಾತ್ ಆಸ್ಪತ್ರೆಗೆ ದಾಖಲು : ವಿಷಪ್ರಾಶನ ಶಂಕೆ
Monday, December 18, 2023
ನವದೆಹಲಿ: ಭಾರತ ದೇಶಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತೀವ್ರ ಸ್ವರೂಪದ ರೋಗದಿಂದ ಬಳಲುತ್ತಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿಗಳ ದಾವೂದ್ ಇಬ್ರಾಹಿಂ ಕೂಡಾ ಓರ್ವನು. ಈತ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.
ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷಪ್ರಾಷಣವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.