ಮಂಗಳೂರು: ಮೀನು ಟೆಂಪೊ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Thursday, December 21, 2023
ಮಂಗಳೂರು: ಮೀನಿನ ಟೆಂಪೊ ಡಿಕ್ಕಿ ಹೊಡೆದು ಬೈಕ್ ಸವಾರನ ಮೇಲೆಯೇ ಹರಿದು ಹೋದ ಪರಿಣಾಮ
ಆತ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ.
ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್(57) ಮೃತಪಟ್ಟ ದುರ್ದೈವಿ. ಅಬ್ದುಲ್ ರವೂಫ್ ಅವರು ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಮೀನಿನ ಲಾರಿ ಅತಿವೇಗದಿಂದ ಬಂದು ಬೈಕಿನ ಮಿರರ್ ತಾಗಿದಡ. ಪರಿಣಾಮ ಬೈಕ್ ರಸ್ತೆಗೆ ಬಿದ್ದು, ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳದಲ್ಲಿ ದೇಹ ಛಿದ್ರಛಿದ್ರವಾಗಿ ಬಿದ್ದಿದ್ದು, ರಕ್ತ ಚೆಲ್ಲಿತ್ತು. ಪೊಲೀಸರೇ ಅದಕ್ಕೆ ಮಣ್ಣು ಸುರಿದಿದ್ದಾರೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಆದರೆ ಕಂಕನಾಡಿ ಸಂಚಾರಿ ಪೊಲೀಸರು ವಾಹನಗಳನ್ನು ತೆರವು ಮಾಡಿದ್ದಾರೆ.