Mangalore-ಸಮುದ್ರಕ್ಕೆ ಹಾರಿ ಸಿಟಿ ಬಸ್ ಚಾಲಕ ಆತ್ಮಹತ್ಯೆ
Tuesday, December 19, 2023
ಮಂಗಳೂರು: ಸಿಟಿ ಬಸ್ ಚಾಲಕರೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿರುವ ಜಗದೀಶ್ ಅವರು ಸ್ಟೇಟ್ ಬ್ಯಾಂಕ್ ಮತ್ತು ಕಿನ್ಯಾ ನಡುವೆ ಚಲಿಸುವ ಖಾಸಗಿ ಸಿಟಿ ಬಸ್ ನಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಮುಂಜಾನೆ ಸೋಮೇಶ್ವರದ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೂ ಮುನ್ನ ಸಮುದ್ರ ತೀರದಲ್ಲಿ ಬೈಕನ್ನಿಟ್ಟು, ಟವಲೊಂದರಲ್ಲಿ ಬೈಕ್ ಕೀ, ಪರ್ಸ್, ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ.ಜಗದೀಶ್ ಅವರ ಪರ್ಸ್ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ. ಜಗದೀಶ್ ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಇವರ ತಂದೆ ಕೂಡ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.