PADUBIDRE- ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಯುವಕ ಸಾವು
Saturday, December 23, 2023
ಪಡುಬಿದ್ರಿ,: ಕೈರಂಪಣಿ ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಕಾಡಿಪಟ್ಟ ಬೀಚ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಪಡುಬಿದ್ರಿ ಗೊಪಾಲ ಅವರ ಮಗ ವಸಂತ (32) ಪಾದೆಬೆಟ್ಟು ಯಾನೆ ಬಡ್ಡು ಮೃತ ಯುವಕ.
ಮೃತ ವಸಂತ್ ಪಡುಬಿದ್ರಿಯ ಭುವನೇಂದ್ರ ಅವರ ಕೈರಂಪಣಿ ದೋಣಿಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಶುಕ್ರವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೀನುಗಾರಿಕೆಗಾಗಿ ಕೈರಂಪಣಿಯ ಬಲೆಯ ಇನ್ನೊಂದು ತುದಿಯನ್ನು ಹಿಡಿದುಕೊಂಡು ಮೀನುಗಾರಿಕೆ ಮಾಡುತ್ತಿದ್ದ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಆಯತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.