-->
ಮಂಗಳೂರು: ಹಿಜಾಬ್ ರದ್ದು ವಾಪಾಸ್ ವಿಚಾರದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯರೇ ಹೇಳಿದ್ದಾರೆ - ಡಾ.ಜಿ.ಪರಮೇಶ್ವರ್

ಮಂಗಳೂರು: ಹಿಜಾಬ್ ರದ್ದು ವಾಪಾಸ್ ವಿಚಾರದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯರೇ ಹೇಳಿದ್ದಾರೆ - ಡಾ.ಜಿ.ಪರಮೇಶ್ವರ್


ಮಂಗಳೂರು: ಹಿಜಾಬ್ ರದ್ದತಿ ವಾಪಾಸಾತಿ ವಿಚಾರದಲ್ಲಿ ಗೃಹಸಚಿವ ಡಾ‌.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿ, ಹಿಜಾಬ್ ರದ್ದು ವಾಪಾಸ್ ವಿಚಾರದಲ್ಲಿ ಸರಕಾರ ಆದೇಶವನ್ನೇ ಮಾಡಿಲ್ಲ. ಒಂದು ವೇಳೆ ಮಾಡಿದ್ದರೂ ನಾವು ಅದನ್ನು ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರೇ ಹೇಳಿಕೊಂಡಿದ್ದಾರೆ. ಅದರ ಸಾಧಕ ಭಾದಕ ನೋಡಿಕೊಂಡು ಸರಕಾರವೇ ತೀರ್ಮಾನ ಕೈಗೊಳ್ಳುತ್ತದೆ. ಗೊಂದಲ ಮಾಡುವ ಅವಶ್ಯಕತೆಯಿಲ್ಲ. ಮುಸ್ಲಿಂ ಸಮುದಾಯದವರು ಹಿಜಾಬ್ ಅನ್ನು ಹಾಕಿಕೊಂಡೇ ಬರುತ್ತಾರೆ. ಬಿಜೆಪಿ ಸರಕಾರ ಬಂದ ಬಳಿಕ ಈ ಗೊಂದಲ ಸೃಷ್ಟಿಯಾಗಿದೆ. ಆದ್ದರಿಂದ ಈ ಮೊದಲು ನಾವು ಯಾವ ರೀತಿ ಜೀವನ ನಡೆಸಿದೆವೋ ಅದೇ ರೀತಿ ಇದ್ದರೆ ಒಳಿತು ಎಂದರು.




ಸಂತೆ ವ್ಯಾಪಾರದಲ್ಲಿ ಧರ್ಮದಂಗಲ್ ವಿಚಾರದಲ್ಲಿ ಪ್ರತಿಕ್ರಿಯಿಸಿ, ಧರ್ಮ ಹಾಗೂ ಜನಸಮುದಾಯದ ಹಕ್ಕುಗಳ ವಿಚಾರಗಳಲ್ಲಿ ನಾವು ಸಂವಿಧಾನವನ್ನು ಬಿಟ್ಟು ಯಾವ ಕೆಲಸವನ್ನು ಮಾಡೋಲ್ಲ‌. ಯಾವ ತೀರ್ಮಾನ ತೆಗೆದುಕೊಳ್ಳುವುದಿದ್ದಲ್ಲೂ ಸಂವಿಧಾನದ ಚೌಕಟ್ಟಿನೊಳಗೇ ತೆಗೆದುಕೊಳ್ಳುತ್ತೇವೆ. ಇದು ಕೆಲವರಿಗೆ ನೋವಾಗಬಹುದು, ಇನ್ನು ಕೆಲವರಿಗೆ ಸಂತೋಷವಾಗಬಹುದು ಎಂದರು.

ಆ್ಯಂಟಿ ಕಮ್ಯುನಲ್ ವಿಂಗ್ ಮಾಡಿದ್ದರೂ ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಂತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನೈತಿಕ ಪೊಲೀಸ್ ಗಿರಿ ಬಹಳಷ್ಟು ಕಡಿಮೆ ಆಗಿದೆ ಎಂಬುದು ನಮಗೆ ಬಂದ ಮಾಹಿತಿ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ ಪೊಲೀಸ್ ಕಮಿಷನರ್, ಎಸ್ಪಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಹಾಗೆಂದು ಎಲ್ಲರ ಮೇಲೂ ಕೇಸ್ ಹಾಕಬೇಕೆಂದಲ್ಲ. ಯಾರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ ಅವರ ಮೇಲೆ ಕ್ರಮ ಜರುಗಿಸಬೇಕು. ಯಾರು ನೈತಿಕ ಪೊಲೀಸ್ ಗಿರಿ ಮಾಡಿಲ್ಲವೋ ಅವರು ಯಾವುದೇ ಆತಂಕಿತರಾಗುವ ಅಗತ್ಯವಿಲ್ಲ. ಪೊಲೀಸ್ ಇಲಾಖೆಗೆ ಹೆಚ್ಚಿನ ಸಿಬ್ಬಂದಿ ಅಗ್ತವಿದೆ. ಆದ್ದರಿಂದ ಅದಕ್ಕೆ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.

ಸಚಿವನಾದರೂ 'ದಲಿತ' ಎಂಬ ಕೀಳುಭಾವನೆಯಿಂದ  ಮುಕ್ತಗೊಂಡಿಲ್ಲ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಸಾಮಾನ್ಯವಾಗಿ ಸಮಾಜದಲ್ಲಿ ಅಂತಹ ಮಾತುಗಳು ಬರುತ್ತಿರುತ್ತದೆ. ಅದನ್ನೇ ನಾನು ಹೇಳಿದ್ದು, ಅದರಲ್ಲಿ ಸುಳ್ಳೇನಿಲ್ಲ. ಆದರೆ ಸಿಎಂ ಪಟ್ಟ ದಲಿತ ಎಂಬ ಕಾರಣದಿಂದ ತಪ್ಪಿದ್ದಲ್ಲ. ಕಾಂಗ್ರೆಸ್ ನಲ್ಲಿ ಜಾತಿ ಆಧಾರದಲ್ಲಿ ಸಿಎಂ ಮಾಡೋದಲ್ಲ. ಅವರ ಸಾಮರ್ಥ್ಯ, ಪಕ್ಷಕ್ಕೆಷ್ಟು ಕೆಲಸ ಮಾಡಿದ್ದಾರೆ, ಹಿರಿತನ ನೋಡಿ ಸಿಎಂ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.



Ads on article

Advertise in articles 1

advertising articles 2

Advertise under the article