ಕಾಪು: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ಪತ್ನಿಯೊಂದಿಗೆ ಆತ್ಮಹತ್ಯೆ !
Wednesday, December 13, 2023
ಕಾಪು: ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಗಳಿಬ್ಬರು ಮಂಗಳವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟುಹಾಕಿ ಹಲವಾರು ನಾಟಕಗಳನ್ನು ಪ್ರದರ್ಶಿಸಿದ್ದರು. ಅವರು ಸದಾ ಸಮಾಜಪರ ಕಾಳಜಿ ಹೊಂದಿದ್ದರು. ಯಾವುದೇ ಕ್ಷಣದಲ್ಲಿಯೂ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೆ ಇತ್ತೀಚೆಗೆ ಹಣಕಾಸಿನ ತೊಂದರೆಗೊಳಗಾಗಿದ್ದರು ಎನ್ನಲಾಗಿದೆ. ಕೌಟುಂಬಿಕ ಕಾರಣದಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.