ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ವಾರ್ಡನ್ ಅಮಾನತು
Friday, January 12, 2024
ತುಮಕೂರು: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಆದ್ದರಿಂದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಚಲನವಲನವನ್ನು ಗಮನಿಸದ ಹಾಸ್ಟೆಲ್ ವಾರ್ಡನ್ ನಿವೇದಿತಾ ಎಂಬವರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಿವಾಸಿಯಾಗಿರುವ ಬಾಲಕಿಯು ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಹೊಟ್ಟೆ ನೋವಿನಿಂದ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆಯ ಮೂಲಕ ಮಗುವನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ವೈದ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಆದೇಶಿಸಿದ್ದಾರೆ.