-->
ಮಂಗಳೂರು: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು, ಪೊಲೀಸ್ ಸಿಬ್ಬಂದಿಗೆ ಗಾಯ

ಮಂಗಳೂರು: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು, ಪೊಲೀಸ್ ಸಿಬ್ಬಂದಿಗೆ ಗಾಯ

ಮಂಗಳೂರು: ಇಲ್ಲಿನ ಪಡೀಲ್ ಪೊಲೀಸ್ ಚೆಕ್ ಪೋಸ್ಟ್ ಬಳಿಯಲ್ಲಿ ಸೋಮವಾರ ರಾತ್ರಿ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಪೊಲೀಸರೊಬ್ಬರು ಗಾಯಗೊಂಡಿದ್ದಾರೆ.

ಒರಿಸ್ಸಾ ಮೂಲದ ಮಾಲಿಕ್(48) ಎಂಬವರು ಮೃತಪಟ್ಟ ದುರ್ದೈವಿ. ಈ ವೇಳೆ ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್ ಹರೀಶ್ ಎಂಬವರು ಗಾಯಗೊಂಡಿದ್ದಾರೆ.

ಬಿ.ಸಿ.ರೋಡ್ ನಿಂದ ನಿರ್ಲಕ್ಷ್ಯದಿಂದ ಕಾರು  ಚಲಾಯಿಸಿಕೊಂಡು ಬಂದಿದೆ. ಪಡೀಲ್ ಚೆಕ್ ಪೋಸ್ಟ್ ಬಳಿ ಕಾರು ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article