-->
ಹಿರಿಯ ಸಾಹಿತಿ  ಅಮೃತ ಸೋಮೇಶ್ವರ ನಿಧನ

ಹಿರಿಯ ಸಾಹಿತಿ ಅಮೃತ ಸೋಮೇಶ್ವರ ನಿಧನ



ಮಂಗಳೂರು: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ ಅಮೃತ ಸೋಮೇಶ್ವರ ಇಂದು ನಿಧನ ಹೊಂದಿದ್ದಾರೆ.


ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27 ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವರೆಗೆ ಕಲಿತರು. ನಂತರ ಆನಂದಾಶ್ರಮ ಪ್ರೌಢಶಾಲೆಯಲ್ಲಿ 6ನೇ ತರಗತಿಯ ಕಲಿಕೆ ಮುಂದುವರಿಸಿದ ಅವರು 1954ರಲ್ಲಿ ಎಸೆಸೆಲ್ಸಿ ಉತ್ತೀರ್ಣರಾದರು.




ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಅಮೃತ ಸೋಮೇಶ್ವರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ ಎಂದು ಹಲವು ಸಾಹಿತಿಗಳು, ಲೇಖಕರು ಸಂತಾಪ ವ್ಯಕ್ತಪಡಿಸಿದ್ದಾರೆ.


Ads on article

Advertise in articles 1

advertising articles 2

Advertise under the article