-->
ಬಂಟ್ವಾಳ: ದರೋಡೆ ಪ್ರಕರಣ ಏಳು ಮಂದಿ ಆರೋಪಿಗಳು ಅರೆಸ್ಟ್

ಬಂಟ್ವಾಳ: ದರೋಡೆ ಪ್ರಕರಣ ಏಳು ಮಂದಿ ಆರೋಪಿಗಳು ಅರೆಸ್ಟ್


ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11ರಂದು ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ತಾಯಿ - ಮಗಳಿಗೆ ಚಾಕು ತೋರಿಸಿ ದರೋಡೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್‌ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್‌ ಎಲ್.‌ ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ ಅಲಿಯಾಸ್ ಪ್ರವೀಣ್‌ (36), ಸುಧೀರ್‌ (29)  ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿರುವ ಮೂಲತಃ ಬಂಟ್ವಾಳ, ಇರಾ ಗ್ರಾಮದವನಾದ ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಸವಿರುವ ಮಹಮ್ಮದ್‌ ಹನೀಫ್‌ (49) ಬಂಧಿತ ದರೋಡೆಕೋರರು.

ಬಂಟ್ವಾಳದ ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡು ನಿವಾಸಿ ಮರೀಟಾ ಸಿಂಥಿಯಾ ಪಿಂಟೋ ಎಂಬವರ ಮನೆಗೆ ಜ.11ರಂದು ಮುಂಜಾನೆ ಮುಸುಕುಧಾರಿಗಳ ತಂಡವೊಂದು ನುಗ್ಗಿದೆ. ಈ ವೇಳೆ ಮನೆಯಲ್ಲಿದ್ದ ತಾಯಿ ಪ್ಲೋರಿನಾ ಪಿಂಟೊ ಹಾಗೂ ಅವರ ಪುತ್ರಿ ಮರಿಟಾ ಪಿಂಟೋ ಅವರಿಗೆ ಚೂರಿ ತೋರಿಸಿ ಗೊದ್ರೇಜ್ ಕೀ ನೀಡುವಂತೆ ಹೆದರಿಸಿದ್ದಾರೆ. ನೀಡದಿದ್ದರೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಆಗ ಅವರು ನೀಡಿರುವ ಗಾದ್ರೆಜ್ ಕೀ ಪಡೆದು ಚಿನ್ನ ಹಾಗೂ ನಗದು ದೋಚಿ ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳ ಪತ್ತೆಗಾಗಿ  ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತನಿಖೆ ಮಾಡಿದ ಪೊಲೀಸರು ದರೋಡೆಕೋರರು ದರೋಡೆಗೈದ 3,15,000 ಮೌಲ್ಯದ ಚಿನ್ನಾಭರಣ ಹಾಗೂ ದರೋಡೆಗೆ ಬಳಸಿದ ಇನ್ನೋವಾ ಕಾರು ಹಾಗೂ ಟಾಟಾ ಇಂಡಿಕಾ ಕಾರನ್ನು ಸ್ವಾಧೀನಪಡಿಸಿದ್ದಾರೆ.

ಆರೋಪಿಗಳ ಪೈಕಿ ಗಣೇಶ ನಾಯ್ಕ ಎಂಬಾತ 2023ರಲ್ಲಿ ಮಂಗಳೂರು ನಗರ ವ್ಯಾಪ್ತಿಯ ಮುಲ್ಕಿಯಲ್ಲಿ ಐಕಳ ಹರೀಶ್‌ ಶೆಟ್ಟಿ ಎಂಬವರ ಮನೆಯಿಂದ ಅಪಾರ ಮೊತ್ತದ ನಗದು,  ಚಿನ್ನಾಭರಣ, ವಜ್ರ ಕಳವು ಮಾಡಿದ ಮುಖ್ಯ ಆರೋಪಿಯಾಗಿದ್ದಾನೆ. ಉಳಿದಂತೆ  ಸೀತಾರಾಮ ಅಲಿಯಾಸ್ ಪ್ರವೀಣ್‌, ಸುಧೀರ್‌ ಹಾಗು ಮಹಮ್ಮದ್‌ ಹನೀಫ್‌ ರವರ ವಿರುದ್ಧ ದ.ಕ.ಜಿಲ್ಲೆ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದೆ.


Ads on article

Advertise in articles 1

advertising articles 2

Advertise under the article