CM ಒತ್ತಿದ ಬಟನ್ ಆನ್ ಆಗದ್ದಕ್ಕೆ ಚೆಸ್ಕಾಂ ಎಂಡಿ ಶ್ರೀಧರ್ ಅಮಾನತು
Thursday, January 25, 2024
ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ಉದ್ಘಾಟನಾ ಬಟನ್ ಆನ್ ಆಗದ ಪ್ರಸಂಗಕ್ಕೆ ಸಂಬಂಧಿಸಿದಂತೆ, ನಿರ್ಲಕ್ಷ್ಯ ತೋರಿದ ಆರೋಪ ಹೊರಿಸಿ ಮೈಸೂರಿನ ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲಾಖೆ ವಿಚಾರಣೆಯನ್ನು ಬಾಕಿ ಇಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಮತ್ತು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಟನ್ ಒತ್ತಿ ಯೋಜನೆ ಉದ್ಘಾಟನೆ ಮಾಡಬೇಕಾಗಿತ್ತು. ಆದರೆ, ಬಟನ್ ಚಾಲನೆಯಾಗಲಿಲ್ಲ. ಇದು ಸರ್ಕಾರವನ್ನು ಮುಜುಗರಕ್ಕೊಳಗಾಗುವಂತೆ ಮಾಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.