ಮಂಗಳೂರು: ಕೆಡಿಪಿ ಸಭೆಯಲ್ಲಿ ಕೋಳಿ ಅಂಕದ ಪರ ಶಾಸಕ ಹರೀಶ್ ಪೂಂಜಾ ಬ್ಯಾಟಿಂಗ್
Friday, January 12, 2024
ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕೋಳಿ ಅಂಕದ ಪರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬ್ಯಾಟಿಂಗ್ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವಸ್ಥಾನ - ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ನಿಮಿತ್ತ ಕೋಳಿ ಅಂಕ ನಡೆಯುತ್ತಿರುತ್ತದೆ. ಆದ್ದರಿಂದ ಪರಂಪರೆಯಿಂದ ನಡೆಯುವ ಕೋಳಿ ಅಂಕಕ್ಕೆ ಅನುಮತಿ ನೀಡಬೇಕೆಂದು ಹರೀಶ್ ಪೂಂಜಾ ಒತ್ತಾಯಿಸಿದ್ದಾರೆ.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಪ್ರತಿಕ್ರಿಯಿಸಿ, ಕಾನೂನಿನಲ್ಲಿ ಕೋಳಿ ಅಂಕಕ್ಕೆ ಅನುಮತಿಯಿಲ್ಲ. ಆದರೆ ಹಿಂದಿನಿಂದಲೂ ಬಂದಿರುವ ಸಂಪ್ರದಾಯದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಸಬಹುದು. ಪರಂಪರೆಯ ಕೋಳಿ ಅಂಕಕ್ಕೆ ಅನುಮತಿ ಬೇಕಿಲ್ಲ. ಆದರೆ ಐದಾರು ದಿನಗಳ ಕಾಲ ಕೋಳಿ ಅಂಕ ನಡೆಸುವಂತಿಲ್ಲ ಎಂದು ಹೇಳಿದರು.