ಬಂಟ್ವಾಳ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಬಾಲಕ ಮೃತ್ಯು
Thursday, January 18, 2024
ಬಂಟ್ವಾಳ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಬಾಲಕನೋರ್ವನು ಮೃತಪಟ್ಟ ಘಟನೆ ಗುರುವಾರ ಸಂಜೆ ನಾವೂರ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ.
ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರೊಂದಿಗೆ ಪ್ರಜ್ವಲ್ ನಾಯಕ್ ನೇತ್ರಾವತಿ ನದಿ ಬದಿಗೆ ಹೋಗಿದ್ದ. ಈ ವೇಳೆ ಆತ ಕಾಲುಜಾರಿ ನದಿಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ತಕ್ಷಣ ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿದ್ದರೂ ಅದಾಗಲೇ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.