ಮಂಗಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ
Thursday, January 4, 2024
ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್ ಬಳಿಯಲ್ಲಿ ಕಾರಿನಲ್ಲಿಯೇ ಕುಳಿತು ಅವರು ವಿಷ ಸೇವನೆ ಮಾಡಿದ್ದಾರೆ. ವೀಳ್ಯದೆಲೆಗೆ ಸ್ಪ್ರೇ ಮಾಡುವ ರಾಸಾಯನಿಕವನ್ನು ಎರಡು ಸ್ಪೂನ್ ನಷ್ಟು ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ..
ಜಗದೀಶ್ ಶೆಟ್ಟಿಯವರು ವಿಷ ಸೇವಿಸಿ ಅಸ್ವಸ್ಥರಾಗಿದ್ದನ್ನು ನೋಡಿ ತಕ್ಷಣ ಅಲ್ಲಿದ್ದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಪರಿಸ್ಥಿತಿ ಗಂಭೀರವಾಗಿತ್ತು. ಆದರೆ ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಆದರೆ ಸದ್ಯ ಅವರನ್ನು ಐಸಿಯುನಲ್ಲಿರಿಸಿ ಪರಿಶೀಲನೆ ಮಾಡಲಾಗುತ್ತಿದೆ.