ಕಾಸರಗೋಡು: ಪಂಚಾಯತ್ ಸದಸ್ಯೆ ಮೃತದೇಹ ರಸ್ತೆಬದಿ ಪತ್ತೆ
Monday, January 8, 2024
ಕಾಸರಗೋಡು: ಇಲ್ಲಿನ ಪಂಚಾಯತ್ ಸದಸ್ಯೆಯೊಬ್ಬರ ಮೃತದೇಹವಾಗಿ ರಸ್ತೆ ಬದಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ.
ಮೊಗ್ರಾಲ್ ಪುತ್ತೂರು ಪಂಚಾಯತ್ 3ನೇ ವಾರ್ಡ್ ಸದಸ್ಯೆ ಪುಷ್ಪಾ (45) ಮೃತಪಟ್ಟ ದುರ್ದೈವಿ.
ಸೋಮವಾರ ಮಧ್ಯಾಹ್ನ ಮೊಗ್ರಾಲ್ ಪುತ್ತೂರು ಪರಿಸರದಲ್ಲಿ ಇವರು ರಸ್ತೆ ಬದಿಯಲ್ಲಿ ಬಿದ್ದಿದ್ದರು. ಅದನ್ನು ಸ್ಥಳೀಯ ನಿವಾಸಿಯೊಬ್ಬರು ಗಮನಿಸಿದ್ದಾರೆ. ತಕ್ಷಣ ಅವರು ಸ್ಥಳೀಯರ ನೆರವಿನಿಂದ ಆಟೋ ರಿಕ್ಷಾ ವೊಂದರಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಆಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊಗ್ರಾಲ್ ಪುತ್ತೂರು ಕೋಟೆಗುಡ್ಡೆ ಸಮೀಪ ಅವರ ಮೃತದೇಹ ಪತ್ತೆಯಾಗಿದೆ.
ಪುಷ್ಪಾ ಅವರು ಸಂಬಂಧಿಕರ ಮನೆಗೆಂದು ತೆರಳಿದ್ದರು ಎನ್ನಲಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.