Love Marriage ಆಗಿದ್ದ 24 ವರ್ಷದ ನವವಿವಾಹಿತೆ ಆತ್ಮಹತ್ಯೆ
Thursday, January 18, 2024
ಶಿವಮೊಗ್ಗ: ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಶಮಿತಾ (24) ಮೃತಪಟ್ಟ ನವವಿವಾಹಿತೆ. ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ತಿಂಗಳಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ಇವರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.
ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.