-->
MDMA ಮಾರಾಟ- ಜುಟ್ಟು ಅಶ್ಪಾಕ್, ಇರ್ಫಾನ್ ಬಂಧನ

MDMA ಮಾರಾಟ- ಜುಟ್ಟು ಅಶ್ಪಾಕ್, ಇರ್ಫಾನ್ ಬಂಧನ



ಮಂಗಳೂರು: MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಜಾಲ್ ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ(27) ಸುರತ್ಕಲ್ ಕಾಟಿಪಳ್ಳದ  ಉಮರ್ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳು.


ಜನವರಿ 1 ರಂದು   ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ  ಸ್ಕೂಟರ್  ನಲ್ಲಿ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದಿತ್ತು.  ಸ್ಥಳಕ್ಕೆ  ಪೋಲಿಸ್ ನಿರೀಕ್ಷಕರು, ಪಿಎಸ್ಐ ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ



ಆರೋಪಿಗಳಿಂದ  19 ಗ್ರಾಂ MDMA ಹಾಗು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ರೂ 1,92,800/- ಎಂದು ಅಂದಾಜಿಸಲಾಗಿದೆ.


ಆರೋಪಿ ಜುಟ್ಟು ಅಶ್ಪಕ್  ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ,  ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್  ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೊಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಉಮ್ಮರ್ ಫಾರೂಕ್ ಇರ್ಫಾನ್  ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿತನ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿದೆ.

Ads on article

Advertise in articles 1

advertising articles 2

Advertise under the article