ಉಳ್ಳಾಲ: ಮದುವೆಯಾಗುವುದಾಗಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ - ಪೊಕ್ಸೊ ಕೇಸ್ ದಾಖಲು
Monday, January 1, 2024
ಉಳ್ಳಾಲ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿವಾಸಿ, ರಿಕ್ಷಾ ಚಾಲಕ ರಝೀನ್ ಲೈಂಗಿಕ ಕಿರುಕುಳ ನೀಡಿರುವ ಆರೋಪಿ.
ಈತ ಮತ್ತು ಮೂಡಿಗೆರೆ ತಾಲೂಕಿನ 17 ವರ್ಷದ ಬಾಲಕಿ ಕಳೆದ ಪರಸ್ಪರ ಪ್ರೀತಿಯ ಬಲೆಗೆ ಬಿದ್ದಿದ್ದರು ಎನ್ನಲಾಗಿದೆ. ಅದೇ ಸಲುಗೆಯಿಂದ ಇದೇ ಸಲುಗೆಯಿಂದ ನಾಲ್ಕು ತಿಂಗಳ ಹಿಂದೆ ಆಕೆಯನ್ನು ಮಂಗಳೂರಿಗೆ ಕರೆಸಿಕೊಂಡಿದ್ದಾನೆ. ಕುಂಪಲದ ತನ್ನ ಬಾಡಿಗೆ ಮನೆಗೆ ಕರೆದೊಯ್ದಿದ್ದ ರಝೀನ್ ವಿವಾಹವಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಬಾಲಕಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾನೆ.
ಇದೀಗ ಸಂತ್ರಸೆ ನೀಡಿದ ದೂರಿನಂತೆ ಆರೋಪಿಯ ಮೇಲೆ ಪೊಕ್ಸೊ ಕೇಸ್ ದಾಖಲಾಗಿದೆ.