ಪುತ್ತೂರು: ಅಪ್ರಾಪ್ತೆಗೆ ಕಿರುಕುಳ ನೀಡಿದ ಅನ್ಯಕೋಮಿನ ಯುವಕ - ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ
Sunday, January 28, 2024
ಪುತ್ತೂರು : ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಅನ್ಯಕೋಮಿನ ಯುವಕನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಡಬ ನಿವಾಸಿ ಶಾಕೀರ್ ಬಾಲಕಿಗೆ ಕಿರುಕುಳ ನೀಡಿರುವ ಆರೋಪಿ.
ಪುತ್ತೂರು ಕಂಬಳ ವೀಕ್ಷಿಸಲು ಆಗಮಿಸಿದ್ದ ವೇಳೆ ಆರೋಪಿ ಶಾಕೀರ್ ಅಪ್ರಾಪ್ತೆಗೆ ಕಿರುಕುಳ ನೀಡಿದ್ದ ಎನ್ನಲಾಗಿದೆ. ತಕ್ಷಣ ಸ್ಥಳಕ್ಕಾಮಿಸಿದ್ದ ಆರೋಪಿ ಶಾರೀಕ್ ನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಬಂಧಿಸಿದ್ದಾರೆ. ಪ್ರಕರಣ ನಡೆದ ಬಳಿಕ ಆಕ್ರೋಶಿತ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ದೌಢಾಯಿಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆರೋಪಿ ಶಾರೀಕ್ ನನ್ನು ತಮಗೆ ಒಪ್ಪಿಸುವಂತೆ ಠಾಣೆಯ ಮುಂಭಾಗ ಜಮಾಯಿಸಿರುವ ಉದ್ರಿಕ್ತರು ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಗುಂಪನ್ನು ಪೊಲೀಸರು ಚದುರಿಸಿದ್ದಾರೆ.
ಈ ವೇಳೆ ಸ್ಥಳಕ್ಕಾಗಮಿಸಿದ ಯುವಕರನ್ನು ಹಿಂದೂ ಮುಖಂಡ ಅರುಣ್ ಪುತ್ತಿಲ ಸಮಾಧಾನ ಪಡಿಸಿದ್ದಾರೆ. ಸದ್ಯ ಆರೋಪಿಯನ್ನು ಶಾರೀಕ್ ನನ್ನು ಬಂಧಿಸಿದ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.