ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ಕಾಲಿಗೆ ಗುಂಡೇಟು - ಸಿಸಿಬಿ ಪೊಲೀಸರಿಂದ ಅರೆಸ್ಟ್
Tuesday, January 9, 2024
ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ಕಾಲಿಗೆ ಗುಂಡಿಕ್ಕಿ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಜೆಪ್ಪು ಕುಡ್ಪಾಡಿಯಲ್ಲಿ ಕಾರಿನಲ್ಲಿ ಸಾಗುತ್ತಿದ್ದಾಗ ಸಿಸಿಬಿ ಪೊಲೀಸರು ಆತನನ್ನು ಬಂಧಿಸಲು ಯತ್ನಿಸಿದ್ದಾರೆ. ಆಗ ಆತ ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ್ದ. ಆದ್ದರಿಂದ ಆತನ ಕಾಲಿಗೆ ಫೈರಿಂಗ್ ಮಾಡಲಾಗಿದೆ.
ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಶೀಟರ್ ಆಕಾಶಭವನ ಶರಣ್ ನನ್ನು ಬಂಧಿಸಲು ಯತ್ನಿಸಿದ್ದಾರೆ. ಆಗ ಈತ ಪೊಲೀಸರ ಮೇಲೆಯೇ ಕಾರು ಹತ್ತಿಸಿ ಕೊಲೆಗೆತ್ನಿಸಿದ್ದ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಇಂದು ಮಧ್ಯಾಹ್ನ ಶರಣ್ ಜಪ್ಪು ಕುದ್ದಾಡಿಯಲ್ಲಿದ್ದಾನೆಂದು ಖಚಿತ ಮಾಹಿತಿಯ ಮೇರೆಗೆ ವಶಕ್ಕೆ ಪಡೆಯಲು ಮುಂದಾಗಿದ್ದರು. ಆಗ ಈತ ತಪ್ಪಿಸಲು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ್ದಾನೆ. ಆಗ ಸಿಸಿಬಿ ಪಿಎಸ್ಸೈ ಸುದೀಪ್ ರಿಂದ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳು ಆಕಾಶಭವನ ಶರಣ್ ನನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಮೇಲೆ ಕೊಲೆ, ಕೊಲೆಯತ್ನ, ಪೊಕ್ಸೊ ಸೇರಿದಂತೆ 21ಕ್ಕೂ ಅಧಿಕ ಪ್ರಕರಣಗಳಿದೆ.