Sullya:-ಗುಂಪಿನಿಂದ ಬೇರ್ಪಟ್ಟ ಮರಿಯಾನೆ..ತಾಯಿಯ ಬಳಿ ಸೇರಿಸಲು ಅರಣ್ಯ ಇಲಾಖೆಯ ಹರಸಾಹಸ
Friday, January 19, 2024
ಸುಳ್ಯ
ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ. ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ ಗುಂಪಿನಿಂದ ಮರಿಯಾನೆ ತಪ್ಪಿಸಿಕೊಂಡು ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ.