ರಾಮ ಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ನೀಡಲು ಉಡುಪಿ ಶಾಸಕ ಮನವಿ
Tuesday, January 2, 2024
ಉಡುಪಿ: ಹಿಂದೂಗಳ ಶ್ರದ್ದಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ, ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜ. 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಆ ಪವಿತ್ರ ದಿನವನ್ನು ದೇಶಾದ್ಯಂತ ದೀಪಾವಳಿ ಹಬ್ಬದಂತೆ ಸಂಭ್ರಮದಿಂದ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ರಾಜ್ಯದ ಜನತೆಗೆ ಅದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.