ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ
Wednesday, February 28, 2024
ಮಂಗಳೂರು: ಎಸ್ಎಸ್ಎಲ್ ಸಿ ಪ್ರಿಪರೇಟರಿ ಪರೀಕ್ಷೆ ಬರೆದು ದಿಢೀರ್ ನಾಪತ್ತೆಯಾಗಿದ್ದ ನಗರದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಇದೀಗ ಮೃತದೇಹವಾಗಿ ಪತ್ತೆಯಾಗಿದ್ದಾರೆ.
ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತಪಟ್ಟ ದುರ್ದೈವಿ ವಿದ್ಯಾರ್ಥಿಗಳು.
ನಗರದ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆದ ಬಳಿಕ ಶಾಲೆಯಿಂದ ಹೊರಬಂದ ಈ ನಾಲ್ವರು ವಿದ್ಯಾರ್ಥಿಗಳು ದಿಢೀರ್ ನಾಪತ್ತೆಯಾಗಿದ್ದರು. ಮಕ್ಕಳು ಮನೆಗೆ ಬರದ ಹಿನ್ನೆಲೆಯಲ್ಲಿ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಆದರೆ ಇದೀಗ ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರು ಮೃತದೇಹದವಾಅಗಿ ಪತ್ತೆಯಾಗಿದ್ದಾರೆ. ಪರೀಕ್ಷೆ ಬಳಿಕ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.