ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
Wednesday, February 28, 2024
ಮಾಜಿ ಸಿಎಂ ಹೆ ಚ್ ಡಿ ಕುಮಾರ ಸ್ವಾಮಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.ವಿಧಾನಸೌಧಕ್ಕೆ ಆಗಮಿಸಿದ ವೇಳೆಯೇ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಅನಾರೋಗ್ಯ ಹಿನ್ನೆಲೆ ಇಂದಿನ ಕಲಾಪಕ್ಕೂ ಕುಮಾರಸ್ವಾಮಿ ಗೈರಾಗಿದ್ದರು. ಇಂದು ಬೆಳಗ್ಗೆ ಕಲಾಪದಲ್ಲಿ ಭಾಗಿಯಾಗಲಯ ಆಗಮಿಸಿದ್ದ ವೇಳೆ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ವಿಧಾನಸೌಧದಿಂದ ನೇರವಾಗಿ ಜಯನಗರದ ಅಪೋಲೋ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದಾರೆ. ಕುಮಾರಸ್ವಾಮಿ ಅವರು ಗಂಟಲು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್ ನಿಂದ ಬಳಲುತ್ತಿದ್ದರಂತೆ. ಇಂದು ಕಲಾಪಕ್ಕೆ ಆಗಮಿಸಿದ ವೇಳೆ ಮಾತನಾಡಲು ಕಷ್ಟವಾದ ಹಿನ್ನೆಲೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ