ನಳಿನ್ ಕುಮಾರ್ ಕಟೀಲ್ ಗೆ ಈ ಬಾರಿ ಟಿಕೆಟ್ ಇಲ್ಲ?
Friday, February 16, 2024
ಮಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ಕುತೂಹಲ ಮುಂದುವರಿದಿದೆ.
ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿಯ ಅಭ್ಯರ್ಥಿಗಳ್ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮೂರು ಬಾರಿ ಬಿಜೆಪಿಯಿಂದ ಗೆದ್ದ ನಳಿನ್ ಕುಮಾರ್ ಕಟೀಲ್ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗುತ್ತಾರ ಎಂಬುದು ಪ್ರಶ್ನೆಯಾಗಿ ಉಳಿದಿದೆ.
ಮೂಲಗಳ ಪ್ರಕಾರ ಈ ಬಾರಿ ನಳಿನ್ ಕುಮಾರ್ ಕಟೀಲ್ ಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂದು ಹೇಳಲಾಗಿದೆ. ನಳಿನ್ ಕುಮಾರ್ ಕಟೀಲ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಆಕ್ರೋಶ ಹೆಚ್ಚಿರುವುದು, ರಾಜ್ಯಾಧ್ಯಕ್ಷ ರಾಗಿದ್ದ ವೇಳೆ ಪಕ್ಷ ವನ್ನು ಮತ್ತೆ ಅಧಿಕಾರಕ್ಕೆ ತರಲು ವಿಫಲವಾಗಿರುವುದು ಅವರ ಬಗ್ಗೆ ಇರುವ ಮೈನಸ್ ಪಾಯಿಂಟ್.
ಮೂಲಗಳ ಪ್ರಕಾರ ಬ್ರಜೇಶ್ ಚೌಟ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬ್ರಿಜೆಶ್ ಚೌಟ ಅವರು ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿದ್ದು ಅವರಿಗೆ ಟಿಕೆಟ್ ಕೊಡಲು ಹೈಕಮಾಂಡ್ ಉತ್ಸುಕವಾಗಿದೆ ಎಂದು ತಿಳಿದುಬಂದಿದೆ. ಈ ವಿಚಾರ ತಿಳಿದ ಕರಾವಳಿ ಬಿಜೆಪಿ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಬ್ರಜೇಶ್ ಚೌಟ ಬದಲು ಬಿಲ್ಲವ ಅಭ್ಯರ್ಥಿ ಮಾಡಬೇಕೆಂದು ವಿನಂತಿ ಮಾಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.