ಪೋಲಿಸ್ ಸತಿ ಪತಿಯರ ಪತಿ,ಪತ್ನಿಯರ ವರ್ಗಾವಣೆ ಇನ್ನು ಸುಲಭ - ಅಂತರ್ ಜಿಲ್ಲಾ ವರ್ಗಾವಣೆಗೆ ಒಪ್ಪಿದ ರಾಜ್ಯ ಸರ್ಕಾರ
Tuesday, February 27, 2024
ಬೆಂಗಳೂರು : ಸದಾ ಕರ್ತವ್ಯದಲ್ಲಿ ತೊಡಗಿರುವ ಕಷ್ಟದ ಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರಿಗೆ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಗುಡ್ ನ್ಯೂಸ್
ಕೊಟ್ಟಿದೆ.
ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಪತ್ರಕರ್ತರ ಜತೆ ಮಾಹಿತಿ ಹಂಚಿಕೊಂಡ ಗೃಹ ಸಚಿವ ಡಾ.ಜಿ ಪರಮೇಶ್ವರ್, ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿ, ಐಜಿಪಿಗೆ ಸೂಚಿಸಲಾಗಿದೆ ಎಂದರು.ಅರ್ಹ ಪೊಲೀಸ್ ಸಿಬ್ಬಂದಿಗಳನ್ನು ಪತಿ-ಪತ್ನಿ ಪ್ರಕರಣ ಸೇರಿದಂತೆ ವಿವಿಧ ಕಾರಣಗಳಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಕ್ರಮ ವಹಿಸುವಂತೆ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರಿಗೆ ಗೃಹ ಸಚಿವ ರು ಸೂಚನೆ ನೀಡಿದ್ದಾರೆ.
ಸರ್ಕಾರದ ಈ ಆದೇಶದಿಂದ ಕೆಲವೇ ದಿನಗಳಲ್ಲಿ ಪತಿ-ಪತ್ನಿ ಪ್ರಕರಣದಲ್ಲಿ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಆರಂಭಗೊಳ್ಳಲಿದ್ದು, ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ ಸಿಕ್ಕಿದೆ.