ಬಂಟ್ವಾಳ: ಕಂಟೈನರ್ ಲಾರಿ - ಖಾಸಗಿ ಬಸ್ ನಡುವೆ ಅಪಘಾತ - ಲಾರಿ ಚಾಲಕ ಗಂಭೀರ ಗಾಯ
Saturday, March 9, 2024
ಬಂಟ್ವಾಳ: ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿರುವ ಅಪಘಾತದಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಮುಂಭಾಗದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಬಿ.ಸಿ.ರೋಡಿನಿಂದ ಮೂಡುಬಿದಿರೆ ಕಡೆಗೆ ಸಂಚರಿಸುತ್ತಿದ್ದ ಕಂಟೈನರ್ ಹಾಗೂ ಮೂಡುಬಿದಿರೆಯಿಂದ ಬಂಟ್ವಾಳದತ್ತ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಗಾಯಾಳು ಲಾರಿ ಚಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಖಾಸಗಿ ಬಸ್ ನಲ್ಲಿ ಶಾಕಾ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಪ್ರಯಾಣಿಕರಿದ್ದರು. ಆದರೆ ಇವರೆಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.