ಇಡಿಯಿಂದ ಅರವಿಂದ ಕೇಜ್ರಿವಾಲ್ ಅರೆಸ್ಟ್
Thursday, March 21, 2024
ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಹಾಗೂ ಆಮ್ ಆದ್ಮಿ ಪಾರ್ಟಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದೆ. ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಆಗಮಿಸಿದ್ದ ಇಡಿ ಅಧಿಕಾರಿಗಳು ಕೆಲ ಹೊತ್ತು ವಿಚಾರಣೆ ನಡೆಸಿ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿಯೇ ಬಂಧಿಸಿದ್ದಾರೆ.