ಅನಂತ ಕುಮಾರ್ ಹೆಗಡೆಗೆ BJP ಟಿಕೆಟ್ ನಿರಾಕರಣೆ- ಶೆಟ್ಟರ್ ಗೆ ಬೆಳಗಾವಿ
Sunday, March 24, 2024
ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಐದನೇ ಪಟ್ಟಿ ಘೋಷಿಸಿದೆ. ಬೆಳಗಾವಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಜಗದೀಶ್ ಶೆಟ್ಟರ್ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರದಿಂದ ಡಾ. ಸುಧಾಕರ್‌ಗೆ ಟಿಕೆಟ್ ನೀಡಲಾಗಿದೆ. ಇನ್ನು ರಾಯಚೂರಿನಿಂದ ರಾಜಾ ಅಮರೇ ನಾಯಕ್ ಟಿಕೆಟ್ ಪಡೆದುಕೊಂಡಿದ್ದಾರೆ. ಭಾರಿ ಕುತೂಹಲ ಕೆರಳಿಸಿದ ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ವಶ್ವರ ಹೆಗೆಡೆ ಕಾಗೇರಿಗೆ ಟಿಕೆಟ್ ಘೋಷಿಸಲಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಲಾಗಿಲ್ಲ.
ಕರ್ನಾಟಕ 4 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ ಹೈಕಮಾಂಡ್ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ.ಬಿಜೆಪಿ ಪಕ್ಷ ಸೇರಿದ ಬೆನ್ನಲ್ಲೇ ನವೀನ್ ಜಿಂದಾಲ್ ಕುರುಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಕೇರಳದ ವಯಾನಾಡು ಕ್ಷೇತ್ರದಿಂದ ಕೆ ಸುರೇಂದ್ರನ್‌ಗೆ ಟಿಕೆಟ್ ನೀಡಲಾಗಿದೆ.