ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ - ಹಲವರಿಗೆ ಗಾಯ
Friday, March 1, 2024
ಬೆಂಗಳೂರು: ನಗರದ ಕುಂದಲಹಳ್ಳಿ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಈ ಸ್ಫೋಟದಲ್ಲಿ ಐವರು ಗಾಯಗೊಂಡಿರುವ ಶಂಕೆಯಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸಿಪಿ ರೀನಾ ಸುವರ್ಣ ಹಾಗೂ ಮಾರತ್ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಸ್ಫೋಟದಿಂದ ಹೋಟೆಲ್‌ನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸಿಲಿಂಡರ್ ಸ್ಫೋಟಗೊಂಡಿರುವ ಬಗ್ಗೆ ಶಂಕೆಯಿದೆ.