ಮಾಜಿ ಸಿಎಂ ಯಡಿಯೂರಪ್ಪ ಮೇಲೆ ಪೊಕ್ಸೊ ಕೇಸ್ ದಾಖಲು - ಬಿಎಸ್ ವೈ ಬಂಧನ ಸಾಧ್ಯತೆ
Friday, March 15, 2024
ಬೆಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಸದಾಶಿವ ನಗರ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಿ ಎಸ್ ವೈ ಗೆ ಬಂಧನ ಭೀತಿ ಎದುರಾಗಿದೆ.
ಸಂತ್ರಸ್ತೆಯ ತಾಯಿ ನೀಡಿರುವ ದೂರಿನನ್ವಯ ಸದಾಶಿವಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೋಕ್ಸೊ ಕೇಸ್ ನಲ್ಲಿ ಆಂಟಿಸಿಪೇಟರಿ ಬೇಲ್ ಸಿಗುವ ಅವಕಾಶ ಇಲ್ಲದ ಕಾರಣ ಯಡಿಯೂರಪ್ಪರ ಬಂಧನಕ್ಕೆ ಸಾಧ್ಯತೆಯಿದೆ ಎನ್ನಲಾಗಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪರಿಂದ ಸಹಾಯ ಪಡೆಯಲು ಹೋಗಿದ್ದರು. ಈ ವೇಳೆ ಸಂತ್ರಸ್ತೆಗೆ ಯಡಿಯೂರಪ್ಪರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದಾರೆ.
"ತನ್ನ ಪುತ್ರಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ ಐಟಿ ಗೆ ವಹಿಸುವಂತೆ ಆಗ್ರಹಿಸಿ ಫೆಬ್ರವರಿ 2ರಂದು ಯಡಿಯೂರಪ್ಪರ ಬಳಿ ತಾನು ಮತ್ತು ಪುತ್ರಿ ತೆರಳಿದ್ದೆವು. ಈ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು 17 ವರ್ಷದ ಅಪ್ರಾಪ್ತೆಯ ತಾಯಿ, ಬೆಂಗಳೂರಿನ ಪೋಲಿಸರಿಗೆ ದೂರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.