-->
MUDA Files: ಲೋಕಾಯಕ್ತ ಬಲೆಗೆ ಬಿತ್ತು ಭಾರೀ ಮಿಕ: 25 ಲಕ್ಷ ರೂ. ಲಂಚಕ್ಕೆ ಕೈಚಾಚಿದ ಕಮಿಷನರ್‌ ಅರೆಸ್ಟ್‌

MUDA Files: ಲೋಕಾಯಕ್ತ ಬಲೆಗೆ ಬಿತ್ತು ಭಾರೀ ಮಿಕ: 25 ಲಕ್ಷ ರೂ. ಲಂಚಕ್ಕೆ ಕೈಚಾಚಿದ ಕಮಿಷನರ್‌ ಅರೆಸ್ಟ್‌





ಮಂಗಳೂರು: ಉದ್ಯಮಿಯೊಬ್ಬರಿಂದ 25 ಲಕ್ಷ ರೂ  ಲಂಚ ಸ್ವೀಕರಿಸುವ ವೇಳೆ  ಮುಡಾದ ಕಮೀಷನರ್ ಮತ್ತು ದಲ್ಲಾಳಿಯನ್ನು  ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.


ಮುಡಾ ಆಯುಕ್ತ ಮನ್ಸೂ‌ರ್ ಅಲಿ  ಮತ್ತು  ದಲ್ಲಾಳಿ ಸಲೀಂ ಬಂಧಿತರು.  



ದೂರುದಾರ ಮಂಗಳೂರು ತಾಲೂಕು ಕುಡುಪು ಗ್ರಾಮದ ಸರ್ವೇ ನಂ 57/ಪಿ ರಲ್ಲಿನ ಒಟ್ಟು 10.8 ಎಕ್ರೆ ಜಮೀನನ್ನು ಖರೀದಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪಚ್ಚನಾಡಿ ಮತ್ತು ಕುಡುಪು ಗ್ರಾಮಗಳ ಸುತ್ತಮುತ್ತ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯ ಘಟಕವನ್ನು ಭವಿಷ್ಯದಲ್ಲಿ ವಿಸ್ತರಿಸುವ ಬಗ್ಗೆ ಅವಶ್ಯವಾಗಿರುವ ಜಮೀನನ್ನು ಟಿ.ಡಿ.ಆರ್ ನಿಯಮದಡಿ ಖರೀದಿ ಮಾಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ದೂರುದಾರರಿಗೆ ಹಾಗೂ ಜಮೀನಿನ ಈ ಹಿಂದಿನ ಮಾಲಕರಿಗೆ ಪತ್ರ ವ್ಯವಹಾರವಾಗಿತ್ತು.


ಅದರಂತೆ ಈ ಜಮೀನು 2024 ಜನವರಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹೆಸರಿಗೆ ನೋಂದಣಿಯಾಗಿರುತ್ತದೆ. ಬಳಿಕ ಮಹಾನಗರ ಪಾಲಿಕೆಯ ಆಯುಕ್ತರು ಟಿ.ಡಿ.ಆರ್ ನೀಡಲು ಮುಡಾ‌ ಕಮೀಷನರಿಗೆ ಫೆಬ್ರವರಿ ತಿಂಗಳಲ್ಲಿ ಕಳುಹಿಸಿದ್ದು, ಮುಡಾ ಆಯುಕ್ತರಾದ ಮನ್ಸೂರ್ ಆಲಿರವರು  ಈ  ಫೈಲ್ ಅನ್ನು ಪೆಂಡಿಂಗ್ ಇಟ್ಟಿದ್ದರು.


ಈ ಬಗ್ಗೆ ದೂರುದಾರರು ಮುಡಾ ಆಯುಕ್ತರಾದ ಮನ್ಸೂರ್ ಆಲಿರವರ ಬಳಿ ಹೋಗಿ ಮಾತನಾಡಿದಾಗ 25 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.


ಮುಡಾ ಕಮೀಷನರಗ ಮನ್ಸೂರ್ ಆಲಿ ನಿರ್ದೇಶನದಂತೆ ಬ್ರೋಕರ್ ಮುಹಮ್ಮದ್ ಸಲಿಂ ರವರು ದೂರುದುದಾರರಿಂದ ರೂ.25 ಲಕ್ಷ   ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.


Ads on article

Advertise in articles 1

advertising articles 2

Advertise under the article