-->
ಲೋಕಸಭೆ ಚುನಾವಣೆಯ ಮತದಾನದ ದಿನಗಳಂದು ವೇತನ ಸಹಿತ ರಜೆ ಘೋಷಣೆ

ಲೋಕಸಭೆ ಚುನಾವಣೆಯ ಮತದಾನದ ದಿನಗಳಂದು ವೇತನ ಸಹಿತ ರಜೆ ಘೋಷಣೆ


ಲೋಕಸಭೆ ಚುನಾವಣೆಯು ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಮತದಾನದ ದಿನದಂದು ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಸೂಚನೆ ನೀಡಿದೆ.
ಸದರಿ ದಿನದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರು ಎಲ್ಲಾ ಕಾರ್ಮಿಕರಿಗೆ ಅನುಕೂಲ ಆಗುತ್ತದೆ
ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯನುಸಾರ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು, ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article