-->
ಇಂದಿನಿಂದ  ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ , ಹೇಗಿರಲಿದೆ  ಬಂದೋಬಸ್ತ್

ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ , ಹೇಗಿರಲಿದೆ ಬಂದೋಬಸ್ತ್

All the best.

ಮಾ.25ರಿಂದ ಅಂದರೆ ಇಂದಿನಿಂದ  ಎಪ್ರಿಲ್ 6ರವರೆಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ. 
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ ಗಳು  ಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ.00ಈ ಆದೇಶವು ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯುತ್ತಯಿದ್ದೆ, ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. 4,58,427 ಬಾಲಕರು, 4,37,844 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ಎಸ್ ಎಸ್ ಎಲ್ ಸಿ ಎಕ್ಸಾಂ ಬರೆಯುವವರಿಗೆ ಬಿಸಿಯೂಟ!

2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್‌(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ.

ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ - 1 ರ ಆದೇಶದಲ್ಲಿರುವಂತೆ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗಳು ದಿನಾಂಕ 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಎಸ್ ಎಸ್ ಎಲ್ ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ. 

Ads on article

Advertise in articles 1

advertising articles 2

Advertise under the article