ಕಡಬ: ಕೃಷಿ ಸಾಲದ ಹೊರೆ ವಿಷಸೇವಿಸಿ ಕೃಷಿಕ ಆತ್ಮಹತ್ಯೆ
Tuesday, March 26, 2024
ಕಡಬ: ಕೃಷಿಗೆ ತೆಗೆದುಕೊಂಡ ಸಾಲ ಮರುಪಾವತಿ ಮಾಡಲಾಗದೆ ಹತಾಶೆಗೊಂಡ ಕೃಷಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆಯೊಂದು ಕಡಬದ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ನಡೆದಿದೆ.
ಕಡಬ ಬೂಡಲೂರು ನಿವಾಸಿ ಶಿವಣ್ಣ ಗೌಡ(61)ಆತ್ಮಹತ್ಯೆ ಮಾಡಿಕೊಂಡ ಕೃಷಿಕ.
ಕೃಷಿಕ ಶಿವಣ್ಣ ಗೌಡರು ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿಗೆಂದು 10 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಗೆ ಸಾಧ್ಯವಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತರ ಪುತ್ರ ಹೇಮಂತ್ ಕಡಬ ಪೊಲೀಸರಿಗೆ ನೀಡಿದ ದೂರು ನೀಡಿದ್ದಾರೆ. ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.