ಮಂಗಳೂರು: ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ
Saturday, March 30, 2024
ಮಂಗಳೂರು: ಒಂದು ವರ್ಷದ ಪುಟ್ಟ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ನೇತ್ರಾವತಿ ನದಿಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಹರೇಕಳ-ಪಾವೂರು ಕಡವಿನ ಬಳಿ ನಡೆದಿದೆ
ಅಡ್ಯಾರ್ ಪದವು ನಿವಾಸಿ ಚೈತ್ರಾ (30) ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತಪಟ್ಟವರು.
ಚೈತ್ರಾ ಶುಕ್ರವಾರ ಮಧ್ಯಾಹ್ನದ ಬಳಿಕ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿದ್ದರು. ಶುಕ್ರವಾರ ಸಂಜೆ ಇವರು ರಿಕ್ಷಾದಲ್ಲಿ ಅಡ್ಯಾರ್-ಹರೇಕಳ ಸೇತುವೆ ದಾಟಿ ಹರೇಕಳ- ಪಾವೂರು ಕಡವಿನ ಬಳಿ ಜಂಕ್ಷನ್‌ನಲ್ಲಿ ಇಳಿದಿದ್ದರು. ಬಳಿಕ ನದಿ ಕಾಲುದಾರಿಯಾಗಿ ಪಾವೂರು ಗಾಡಿಗದ್ದೆ ಕಡೆಗೆ ನಡೆದುಕೊಂಡು ನದಿ ತೀರದ ಕಡೆ ಹೋಗಿರುವುದನ್ನು ಸ್ಥಳೀಯರು ಕಂಡಿದ್ದರು.
ಬಳಿಕ ಚೈತ್ರಾ ಹಾಗೂ ಅವರ ಮಗುವಿನ ಮೃತದೇಹ ಹರೇಕಳ ಪಾವೂರು ನದಿ ತೀರದಲ್ಲಿ ಪತ್ತೆಯಾಗಿದೆ. ಚೈತ್ರಾ ಸೊಂಟಕ್ಕೆ ಮಗುವನ್ನು ಕಟ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ವೆನ್ಹಾಕ್ ಶವಗಾರದಲ್ಲಿಡಲಾಗಿದ್ದು, ಪ್ರಕರಣ ದಾಖಲಿಸಿ ಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.