-->
ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ: ಸ್ಪೋಟಕ ಭವಿಷ್ಯ ನುಡಿದ ಯಶವಂತ ಗುರೂಜಿ

ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ: ಸ್ಪೋಟಕ ಭವಿಷ್ಯ ನುಡಿದ ಯಶವಂತ ಗುರೂಜಿ


ತುಮಕೂರು: ಲೋಕಸಭಾ ಚುನಾವಣೆಗೆ ರಂಗು ಮೂಡಿದೆ. ವಿವಿಧ ರಾಜಕೀಯ ಪಕ್ಷಗಳು ಗೆಲುವಿಗಾಗಿ ನಾನಾ ಸರ್ಕಸ್ ಮಾಡುತ್ತಿದೆ. ಈ ನಡುವೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶವಂತ ಗುರೂಜಿಯವರು ಲೋಕಸಭೆಯ ಸ್ಪೋಟಕ ಭವಿಷ್ಯ ನುಡಿದಿದ್ದು, ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ ಆಗಲಿದ್ದಾರೆ ಎಂದಿದ್ದಾರೆ. ಈ ಮೂಲಕ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ ಪಕ್ಷ ಹಿಡಿಯಲಿದ್ದು, ಮಹಿಳಾ ಪ್ರಧಾನಿಯಾಗಿ ಪ್ರಿಯಾಂಕ ಗಾಂಧಿ ಗದ್ದುಗೆ ಏರಲಿದ್ದಾರೆ ಎಂದು ಯಶವಂತ ಗುರೂಜಿ ಶಿವರಾತ್ರಿಯ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ 135 ಸೀಟು ಪಡೆಯಲಿದೆ ಎಂದು‌ ಈ ಹಿಂದೆ ಯಶವಂತ ಗುರೂಜಿ ನಿಖರ ಭವಿಷ್ಯ ನುಡಿದಿದ್ದರು. ಅಲ್ಲದೆ ಕೊರೊನಾ ಮಹಾಮಾರಿ ಬಗ್ಗೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆಯೂ ಗುರೂಜಿ ಭವಿಷ್ಯ ನುಡಿದಿದ್ದರು. ಸದ್ಯ ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ‌ ಬಾರಿ ಒಬ್ಬಳು ಸ್ತ್ರೀ, ಪುರುಷನ ಎದುರು ದುರ್ಗಿಯಾಗಿ ನಿಂತು ಪುರುಷನಿಗೆ ಭಯ ಹುಟ್ಟಿಸಿ ತಾನೇ ಅಧಿಕಾರ ವಹಿಸಲಿದ್ದಾರೆ. ತಾಯಿ ಮಮತೆಯಿಂದ ತನ್ನ ಅಧಿಕಾರವನ್ನು ಮಾತೃ ವಾತ್ಸಲ್ಯದಿಂದ ಪರರಿಗೆ ಬಿಟ್ಟುಕೊಡುವಳು. ಹೀಗೆಂದು ಕಾಲಜ್ಞಾನದಲ್ಲಿ ಉಲ್ಲೇಖವಾದ ಚುನಾವಣಾ ಭವಿಷ್ಯವನ್ನು ಯಶವಂತ ಗುರೂಜಿ ನುಡಿದಿದ್ದಾರೆ.

ಕಾಲಜ್ಞಾನದ ಪ್ರಕಾರ ಪ್ರಧಾನಿಯಾಗಿ ಯೋಗ ಹೊಂದಿರುವುದು ಪ್ರಿಯಾಂಕ ಗಾಂಧಿ ಅವರು. ಬಳಿಕ ಆ ಸ್ಥಾನವನ್ನು ಅವರು ರಾಹುಲ್ ಗಾಂಧಿಗೆ ಬಿಟ್ಟು ಕೊಡುವ ಸಾಧ್ಯತೆಯಿದೆ. ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೆ ಮೋದಿಯವರಿಗೆ ಪ್ರಧಾನಿಯಾಗುವ ಯೋಗವಿತ್ತು. ಆದರೇ ಈಗ ಮೋದಿ ಅವರಿಗೆ ಆ ಯೋಗವಿಲ್ಲ. ಅವರಿಗೆ ಅನಾರೋಗ್ಯ ಕಾಡಬಹುದು. ಸದ್ಯ ಪ್ರಿಯಾಂಕ ಗಾಂಧಿಗೆ ಹಂಸಕ, ಚಂದ್ರಮಂಗಳ, ಬುಧಾಧಿತ್ಯ ಯೋಗ ಶುರುವಾಗಿದೆ. ಈ ಯೋಗದಿಂದಲೇ ಪ್ರಧಾನಿ ಪಟ್ಟ ಸಿಗುವ ಅವಕಾಶ ಒದಗಿಬರಲಿದೆ. ಅನ್ಯ ಪಕ್ಷಗಳ ಬಲದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭವಿಷ್ಯವಿದೆ ಎಂದು ಯಶವಂತ ಗುರೂಜಿ ನೊಣವಿನಕೆರೆಯಲ್ಲಿ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ.

Ads on article

Advertise in articles 1

advertising articles 2

Advertise under the article